ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಿ ಒಂದೂವರೆ ವರ್ಷವಾಗುತ್ತಾ ಬಂದಿದೆ. ಆದರೆ ಇನ್ನೂ, ಅವರು ಅಭಿನಯಿಸಿದ್ದ ಕೊನೆಯ ಸಿನಿಮಾ ರಾಜಮಾರ್ತಾಂಡ ರಿಲೀಸ್ ಗಾಗಿ ಅಭಿಮಾನಿಗಳು ಎದುರು ನೋಡುತ್ತಲೇ ಇದ್ದಾರೆ.ಚಿರು ಅಭಿಮಾನಿಗಳಿಗೆ ಇದು ವಿಶೇಷ ಸಿನಿಮಾವಾಗಿದೆ. ಚಿರು ಸರ್ಜಾ ಈ ಸಿನಿಮಾದ ಶೂಟಿಂಗ್ ಮುಗಿಸಿದ್ದರು. ಆದರೆ ಡಬ್ಬಿಂಗ್ ಮಾಡಲು ಸಾಧ್ಯವಾಗಿರಲಿಲ್ಲ.ಹೀಗಾಗಿ ಅವರ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡುತ್ತಿದ್ದಾರೆ. ಇನ್ನು, ಚಿತ್ರತಂಡ ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಬೇಗನೇ ಮುಗಿಸಿ