ಪುನೀತ್ ನಿವಾಸಕ್ಕೆ ಭೇಟಿಯಿತ್ತ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು| Krishnaveni K| Last Modified ಸೋಮವಾರ, 8 ನವೆಂಬರ್ 2021 (15:28 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸದಲ್ಲಿ ಇಂದು ಅವರ 11 ನೇ ದಿನದ ಕಾರ್ಯ ನೆರವೇರಿದೆ.

ಈ ದಿನ ಪುನೀತ್ ಕುಟುಂಬ ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಬಳಿಕ ಮನೆಯಲ್ಲಿಯೇ ಪೂಜೆ ನೆರವೇರಿಸಿದೆ. ಈ ಕಾರ್ಯದಲ್ಲಿ ಕೇವಲ ಕುಟುಂಬಸ್ಥರು, ಆಪ್ತರಿಗೆ ಮಾತ್ರ ಅವಕಾಶ ನೀಡಲಾಗಿತ್ತು.


ಇಂದು ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್, ಸುನಿಲ್ ಕುಮಾರ್ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕೆಲವು ಕಾಲ ಕುಟುಂಬದೊಂದಿಗೆ ಚರ್ಚೆ ನಡೆಸಿ ತೆರಳಿದೆ. ಮಧ್ಯಾಹ್ನ ಪುನೀತ್ ನಿವಾಸಕ್ಕೆ ತೆರಳಿದ ಸಿಎಂ ಮತ್ತು ಸಚಿವರು ಬಳಿಕ ಅಲ್ಲಿಂದ ತೆರಳಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :