ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಮತ್ತು ಸಮಾಧಿ ಸ್ಥಳ ಅಭಿವೃದ್ಧಿ ಪಡಿಸುವಂತೆ ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕಿಚ್ಚ ಸುದೀಪ್ ಮನವಿಗೆ ಸರ್ಕಾರ ಸ್ಪಂದಿಸಿದೆ. ಮುಖ್ಯಮಂತ್ರಿಗಳ ಪರವಾಗಿ ಅವರ ಮುಖ್ಯ ಕಾರ್ಯದರ್ಶಿಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ವಿಷಯವನ್ನು ಸ್ವತಃ ಸುದೀಪ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ಸಿಎಂ ಸಿದ್ದರಾಮಯ್ಯ ಮತ್ತು