Photo Courtesy: Twitterಬೆಂಗಳೂರು: ವಯೋಸಹಜ ಖಾಯಿಲೆಯಿಂದಾಗಿ ಹಾಸಿಗೆ ಹಿಡಿದಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರನ್ನು ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.ಲೀಲಾವತಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಪುತ್ರ ವಿನೋದ್ ರಾಜ್ ಸಿಎಂಗೆ ತಾಯಿಯ ಆರೋಗ್ಯದ ಬಗ್ಗೆ ವಿಚಾರಿಸಿಕೊಂಡರು.ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಲೀಲಾವತಿಯವರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೆ, ಸ್ಯಾಂಡಲ್ ವುಡ್ ಕಲಾವಿದರಾದ ದರ್ಶನ್, ಅರ್ಜುನ್ ಸರ್ಜಾ, ಉಮಾಶ್ರೀ