ಬೆಂಗಳೂರು: ಕೊರೋನಾ ದಿನೇ ದಿನೇ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ಗಳು ತಮ್ಮ ಸಿನಿಮಾ ಪ್ರಚಾರಕ್ಕೆಂದು ಊರೂರಿಗೆ ತಿರುಗಿ ಜನರನ್ನು ಸೇರಿಸುತ್ತಿರುವುದು ಸರಿಯೇ ಎಂಬ ಪ್ರಶ್ನೆ ಮೂಡಿದೆ. ಇದರ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಈಗಾಗಲೇ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚೆಗೆ ರಾಬರ್ಟ್ ಸಿನಿಮಾ ಈವೆಂಟ್, ಯುವರತ್ನ ಸಿನಿಮಾದ ಪ್ರಚಾರ ಕಾರ್ಯಕ್ರಮಗಳಲ್ಲಿ ಜನ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ನೂಕು ನುಗ್ಗಲು ಉಂಟುಮಾಡಿದ್ದರು.ಈ ವೇಳೆ ಸಾಮಾಜಿಕ ಅಂತರವೂ