ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮತ್ತು ಭಾವನಾ ಮೆನನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಶ್ರೀಕೃಷ್ಣ@ಜಿಮೇಲ್.ಕಾಮ್’ ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗುತ್ತಿದೆ.ಇಂದು ಬೆಳಿಗ್ಗೆ 11 ಗಂಟೆಗೆ ಟ್ರೈಲರ್ ಬಿಡುಗಡೆಯಾಗಲಿದೆ. ಈ ಸಿನಿಮಾ ವಿಜಯದಶಮಿಗೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.ನಾಗಶೇಖರ್ ನಿರ್ದೇಶನದ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಇದರ ಹಾಡುಗಳು ಈಗ ಒಂದೊಂದಾಗಿ ಲಾಂಚ್ ಆಗುತ್ತಿದ್ದು, ಮೆಚ್ಚುಗೆ ಪಡೆದಿದೆ.