ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ಮಾಡುವ ವೇಳೆ ಕೊರೋನಾ ನಿಯಮ ಉಲ್ಲಂಘಿಸಿದ ವಿಚಾರದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ದಂಡದ ಶಿಕ್ಷೆ ನೀಡಲಾಗಿದೆ.ತೆರೆದ ವಾಹನದಲ್ಲಿ ಪ್ರಚಾರ ಮಾಡುವಾಗ ಮಾಸ್ಕ್ ಧರಿಸದೇ ಇದ್ದಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಿದ್ದು, ಇತ್ಯಾದಿ ದರ್ಶನ್ ಮೇಲಿನ ಆರೋಪವಾಗಿದೆ. ಈ ವಿಚಾರದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕ್ರಮಕೈಗೊಳ್ಳದೇ ಇರುವುದಕ್ಕೆ ಪ್ರಶ್ನೆ ಮಾಡಿತ್ತು. ಇದರ ಬೆನ್ನಲ್ಲೇ ಕೋರ್ಟ್ ಒತ್ತಡಕ್ಕೆ ಮಣಿದ ಸರ್ಕಾರ