ಎಸ್.ಎಲ್.ಎನ್. ಕ್ರಿಯೇಶನ್ಸ್ ಲಾಂಛನದಲ್ಲಿ ನಾಗೇಶ್ ಕೋಗಿಲು ನಿರ್ಮಿಸುತ್ತಿರುವ ಎರಡನೇ ಸಿನಿಮಾ ಟಕ್ಕರ್. ದರ್ಶನ್ ಅವರ ಕುಟುಂಬದ ಹುಡುಗ ಮನೋಜ್ ಈ ಸಿನಿಮಾದ ಮೂಲಕ ನಾಯಕನಟನಾಗಿ ಪಾದಾರ್ಪಣೆ ಮಾಡುತ್ತಿರುವ ವಿಚಾರ ಈಗಾಗಲೇ ಜಾಹೀರಾಗಿದೆ. ಇತ್ತೀಚಿಗಷ್ಟೇ ಟಕ್ಕರ್ ಚಿತ್ರದ ಮೊದಲ ಟೀಸರ್ಅನ್ನು ದಿನಕರ್ ತೂಗುದೀಪ ಲೋಕಾರ್ಪಣೆಗೊಳಿಸಿದ್ದರು. ಈಗ ದರ್ಶನ್ ಅವರು ಟಕ್ಕರ್ ಚಿತ್ರತಂಡವನ್ನು ಮನೆಗೆ ಕರೆಸಿಕೊಂಡು ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಈ ಚಿತ್ರವನ್ನು ಯಾವ ರೀತಿ ಬಿಡುಗಡೆ ಮಾಡಬೇಕು