ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿವೆ. ಇದರ ಬೆನ್ನಲ್ಲೇ ದಾಸ ದರ್ಶನ್ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ಕೊರೋನಾ ವೈರಸ್ ಇರುವುದರಿಂದ ಈ ಬಾರಿ ಹುಟ್ಟುಹಬ್ಬದ ಸಂಭ್ರಮಾಚರಣೆ ಬೇಡ ಎಂದು ನಿರ್ಧರಿಸಿದ್ದೇನೆ. ನಾನು ಊರಿನಲ್ಲಿ ಇರುವುದಿಲ್ಲ. ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆ ಶುಭ ಕೋರಲು ಬರುತ್ತಿದ್ದ ನಲ್ಮೆಯ ಅಭಿಮಾನಿಗಳಿಗೆ ಈ ಸೂಚನೆ; ಯಾರೂ ಮನೆಯ ಹತ್ತಿರ ಬಂದು ನಿರಾಶರಾಗಬೇಡಿ. ನನ್ನ ಈ ಕೋರಿಕೆಯನ್ನು