ಬೆಂಗಳೂರು: ಅಲ್ಲು ಅರ್ಜುನ್ ನಾಯಕರಾಗಿರುವ ತೆಲುಗಿನ ‘ಪುಷ್ಪ’ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಪುಷ್ಪ ಸಿನಿಮಾ ಎರಡು ಭಾಗಗಳಲ್ಲಿ ನಿರ್ಮಾಣವಾಗುತ್ತಿದೆ. ಈ ಸಿನಿಮಾದ ಎರಡನೇ ಭಾಗದಲ್ಲಿ ದರ್ಶನ್ ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿಯಿದೆ.ತೆಲುಗಿನಲ್ಲೂ ತಮ್ಮ ಸಿನಿಮಾಗಳ ಮಾರುಕಟ್ಟೆ ವಿಸ್ತರಿಸುವ ವೇಳೆಗೆ ದರ್ಶನ್ ಇಲ್ಲಿನ ಸಿನಿಮಾಗಳಲ್ಲಿ ನಟಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.