Widgets Magazine

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿಗೆ ಕೊರೋನಾ? ವಿಜಯಲಕ್ಷ್ಮೀ ಹೇಳಿದ್ದೇನು?

ಬೆಂಗಳೂರು| Krishnaveni K| Last Modified ಗುರುವಾರ, 25 ಜೂನ್ 2020 (10:17 IST)
ಬೆಂಗಳೂರು: ಕೊರೋನಾ ಹರಡುವಷ್ಟೇ ವೇಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಡುತ್ತಿವೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೊರೋನಾಗೆ ತುತ್ತಾಗಿದ್ದಾರೆ ಎಂಬ ಸುದ್ದಿಯೊಂದು ಹರಡಿದೆ.
 

ಆದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು, ಇದರ ಬಗ್ಗೆ ಸ್ವತಃ ವಿಜಯಲಕ್ಷ್ಮೀ ತಮ್ಮ ಟ್ವಿಟರ್ ಪೇಜ್ ಮೂಲಕ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.
 
‘ನಾನು ಕೊರೋನಾಗೆ ತುತ್ತಾಗಿದ್ದೇನೆಂಬ ಸುದ್ದಿ ಕೇಳಿಬಂದರೆ ನಂಬಬೇಡಿ. ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ಪ್ರತಿಯೊಬ್ಬರೂ ಸುರಕ್ಷಿತರಾಗಿರಿ ಎಂದು ಕೇಳಿಕೊಳ್ಳುವೆ’ ಎಂದು ವಿಜಯಲಕ್ಷ್ಮೀ ಸ್ಪಷ್ಟನೆ ನೀಡಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :