ಬೆಂಗಳೂರು : ನಗರದ ಅರಮನೆ ಮೈದಾನ ಅವರಣದಲ್ಲಿ ಚಿತ್ರರಂಗ ಆಯೋಜಿಸಿರುವ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು. ‘ಪುನೀತ್ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ.