ಬೆಂಗಳೂರು: ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಸಾಕಷ್ಟು ವಿವಾದಕ್ಕೊಳಗಾಗಿತ್ತು. ಇದೀಗ ನಾಯಕ ಧ್ರುವ ಸರ್ಜಾ ಈ ಘಟನೆ ಬಗ್ಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಧ್ರುವ ಸರ್ಜಾ ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ, ಕೆಲಯೇ