Widgets Magazine

ಕೂದಲಿಗೆ ಕತ್ತರಿ ಹಾಕಿ ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ ಧ್ರುವ ಸರ್ಜಾ

ಬೆಂಗಳೂರು| Krishnaveni K| Last Modified ಭಾನುವಾರ, 22 ನವೆಂಬರ್ 2020 (09:18 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಸಿನಿಮಾಗಾಗಿ ಕಳೆದ ಕೆಲವು ತಿಂಗಳುಗಳಿಂದ ಉದ್ದ ಕೂದಲು ಬಿಟ್ಟುಕೊಂಡಿದ್ದರು. ಆದರೆ ಈಗ ಧ್ರುವ ಸಂಪೂರ್ಣವಾಗಿ ಬದಲಾಗಿದ್ದಾರೆ.
 

ಇದೀಗ ಧ್ರುವ ತಮ್ಮ ಉದ್ದ ದಾಡಿ, ಹೇರ್ ಸ್ಟೈಲ್ ಗೆ ಕತ್ತರಿ ಹಾಕಿದ್ದು, ಹೊಸ ಸ್ಟೈಲಿಶ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ. ಧ್ರುವ ಹೊಸ ಲುಕ್ ಈಗ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಇನ್ನು, ಧ್ರುವ ಸರ್ಜಾ ಕೂದಲು ಕತ್ತರಿಸುವುದರ ಜತೆಗೆ ಒಂದು ಒಳ್ಳೆಯ ಕೆಲಸವನ್ನೂ ಮಾಡಿದ್ದಾರೆ. ತಮ್ಮ ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೆರವಾಗಲು ದಾನ ಮಾಡಿ ಮಾದರಿಯಾಗಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :