ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಂದಿನ ಸಿನಿಮಾ ‘ಮಾರ್ಟಿನ್’ಗಾಗಿ ಜಿಮ್ ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ.ಧ್ರುವ ಮಾರ್ಟಿನ್ ಸಿನಿಮಾಗಾಗಿ ದೇಹ ಹುರಿಗೊಳಿಸುತ್ತಿದ್ದು, ಇತ್ತೀಚೆಗೆ ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.ಇನ್ನು, ಮಾರ್ಟಿನ್ ಮೊದಲ ಹಂತದ ಚಿತ್ರೀಕರಣ ನಡೆದಿದ್ದು, ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಎ.ಪಿ. ಅರ್ಜುನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ.