ಬೆಂಗಳೂರು : ಕನ್ನಡಸಿನಿಮಾಗಳಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ ತನ್ನದೇ ಛಾಪು ಮೂಡಿಸಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಶಶಿಕುಮಾರ್ ಅವರ ಮಗ ಆದಿತ್ಯ ಶಶಿಕುಮಾರ್ ಅವರು ಇದೀಗ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಿರ್ದೇಶಕ ಸಿದ್ದಾರ್ಥ್ ಮರದೇಪ ಎಂಬುವರು ಮೊದಲಬಾರಿಗೆ ನಿರ್ದೇಶಿಸುತ್ತಿರುವ ಈ ಚಿತ್ರದ ಮೂಲಕ ಆದಿತ್ಯ ಅವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಆದಿತ್ಯಗೆ ಜೋಡಿಯಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಚಿತ್ರರಂಗಕ್ಕೆ ಕರೆತಂದ