ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಇಂದಿಗೆ 12 ದಿನಗಳಾಗಿವೆ. ಸೋಮವಾರ (ನ.8) ಅವರ ಕುಟುಂಬಸ್ಥರು 11ನೇ ದಿನ ಕಾರ್ಯಗಳನ್ನು ಮಾಡಿದ್ದಾರೆ. ಇನ್ನು, ಅಭಿಮಾನಿಗಳೆಂದರೆ, ಅಪ್ಪುಗೆ ಸಿಕ್ಕಾಪಟ್ಟೆ ಪ್ರೀತಿ. ಡಾ. ರಾಜ್ಕುಮಾರ್ ಕಾಲದಿಂದಲೂ ಅಭಿಮಾನಿಗಳನ್ನು ದೇವರು ಎಂದು ಕರೆದ ಕುಟುಂಬವದು. ಇದೀಗ ಅಪ್ಪು ನಿಧನದ ನಂತರ ಅಸಂಖ್ಯಾತ ಅಭಿಮಾನಿಗಳಿಗೆ ಅನ್ನ ಸಂತರ್ಪಣೆಯನ್ನು ದೊಡ್ಮನೆ ಕುಟುಂಬಸ್ಥರು ಏರ್ಪಡಿಸಿದ್ದಾರೆ. ಇಂದು (ನ.9) ಸುಮಾರು 25 ಸಾವಿರಕ್ಕೂ ಹೆಚ್ಚು ಜನರಿಗೆ ಅನ್ನ ಸಂತರ್ಪಣೆಯನ್ನು