ಬೆಂಗಳೂರು: ನಗರದಲ್ಲಿ ಅನುಮತಿ ಪಡೆಯದೇ ನಿರ್ಮಿಸಲಾದ ಸಿನಿಮಾ ದಿಗ್ಗಜರ ಪುತ್ಥಳಿಗಳನ್ನು ಕೋರ್ಟ್ ಆದೇಶದ ಹಿನ್ನಲೆಯಲ್ಲಿ ತೆರವುಗೊಳಿಸಲು ಮುಂದಾಗಿರುವ ಬಿಬಿಎಂಪಿಗೆ ಈಗ ಅಭಿಮಾನಿಗಳ ವಿರೋಧ ಎದುರಾಗಿದೆ. ಡಾ. ರಾಜ್ ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅಭಿಮಾನಿಗಳು ಒಗ್ಗಟ್ಟಾಗಿ ಬಿಬಿಎಂಪಿ ನಡೆ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ನಟರ ಪ್ರತಿಮೆಗೆ ಕೈ ಹಾಕಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಡಾ.ರಾಜ್ ಮತ್ತು ವಿಷ್ಣು ಅಭಿಮಾನಿಗಳ ಸಂಘ ಎಚ್ಚರಿಕೆ ನೀಡಿದೆ.ಒಂದು ವೇಳೆ ತೆಗೆಯುವುದಾದರೆ