ಸ್ಯಾಂಡಲ್ ವುಡ್ ನಲ್ಲಿನ ಡ್ರಗ್ಸ್ ಮಾಫಿಯಾದ ಸದ್ದು ಜೋರಾಗಿದೆ. ಈ ನಡುವೆ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಗೆ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿಯನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಿಕೆ ಮಾಡಲಾಗಿದೆ.