ಬೆಂಗಳೂರು: ತಾವು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಸಲಗ ಸಿನಿಮಾವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ದುನಿಯಾ ವಿಜಯ್ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಅಕ್ಟೋಬರ್ 14 ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ. ಇದಕ್ಕಾಗಿ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನ ನೀಡಲಾಗಿದೆ.ಇದೀಗ ಚಿತ್ರದ ಟ್ರೈಲರ್ ನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೂಲಕ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.