ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳನ್ನು ಗೌರವದಿಂದಲೇ ಕಾಣುತ್ತಿದ್ದರು. ಆದರೆ ಇಂದು ಅವರ ನಮನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಿರುವುದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದೆ.ಅರಮನೆ ಮೈದಾನದಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 2000 ಮಂದಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇವಲ ರಾಜಕೀಯ, ಸಿನಿಮಾ ಕ್ಷೇತ್ರದ ಗಣ್ಯರು ಮಾತ್ರ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ವಾಣಿಜ್ಯ ಮಂಡಳಿ ಸ್ಪಷ್ಟವಾಗಿ ಹೇಳಿದೆ.ಇದರ ಬಗ್ಗೆ ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ