ಬೆಂಗಳೂರು: ಲಾಕ್ ಡೌನ್ ಬಳಿಕ ಚಿತ್ರಮಂದಿರ ತೆರೆಯಲು ಕೊನೆಗೂ ಅನುಮತಿ ಸಿಕ್ಕಿದೆ. ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಸದಸ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಲಾಕ್ ಡೌನ್ ಬಳಿಕ ಇದುವರೆಗೆ ಹೊರಾಂಗಣ ಚಿತ್ರೀಕರಣಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ನಿನ್ನೆ ಸಿಎಂ ಯಡಿಯೂರಪ್ಪ ಗೃಹ ಕಚೇರಿಯಲ್ಲಿ ವಾಣಿಜ್ಯ ಮಂಡಳಿ ನಾಯಕರು ಭೇಟಿಯಾಗಿ ಥಿಯೇಟರ್ ತೆರೆಯಲು ಅನುಮತಿ ನೀಡುವಂತೆ ಮತ್ತು ಒಳಾಂಗಣ ಚಿತ್ರೀಕರಣಕ್ಕೂ ಅವಕಾಶ ನೀಡುವಂತೆ ಮನವಿ ಮಾಡಿದ್ದರು.ಇದೀಗ ಸರ್ಕಾರ ಥಿಯೇಟರ್ ತೆರೆಯಲು