ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿಗೆ ಕೊನೆಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಸಂಜನಾರ ಮೂರು ತಿಂಗಳ ಜೈಲು ವಾಸ ಕೊನೆಯಾಗಿದೆ. ಒಟ್ಟಾರೆ 85 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಂಜನಾಗೆ ಹೆಚ್ಚಿನ ವೈದ್ಯಕೀಯ ನೆರವು ಅಗತ್ಯವಿರುವುದರಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ. ನ್ಯಾ. ಹರೀಶ್ ಕುಮಾರ್ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡಿದೆ. ವೈದ್ಯಕೀಯ ಆಧಾರದ ಮೇಲೆ