ಗರುಡ ಗಮನ ವೃಷಭ ವಾಹನ ಟ್ರೈಲರ್ ರೆಡಿಯಾಯ್ತು

ಬೆಂಗಳೂರು| Krishnaveni K| Last Modified ಸೋಮವಾರ, 11 ಅಕ್ಟೋಬರ್ 2021 (09:05 IST)
ಬೆಂಗಳೂರು: ರಿಷಬ್ ಶೆಟ್ಟಿ-ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಗರುಡ ಗಮನ ವೃಷಭ ವಾಹನ’ ಸಿನಿಮಾದ ಟ್ರೈಲರ್ ಬಿಡುಗಡೆಗೆ ಸಿದ್ದವಾಗಿದೆ.  
> ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮ ಹೋಂ ಬ್ಯಾನರ್ ಪರಂವಾ ನಿರ್ಮಾಣ ಸಂಸ್ಥೆಯಡಿಯಲ್ಲಿ ರಿಲೀಸ್ ಮಾಡುತ್ತಿದ್ದಾರೆ. ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿರುವ ಈ ಸಿನಿಮಾ ವಿಶಿಷ್ಟ ಕಥಾಹಂದರವನ್ನು ಹೊಂದಿದೆ.>   ಅಕ್ಟೋಬರ್ 15 ರಂದು ಚಿತ್ರದ ಟ್ರೈಲರ್ ಹೊರಬಿಡಲು ಚಿತ್ರತಂಡ ನಿರ್ಧರಿಸಿದೆ. ರಾಜ್ ಬಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಶಿವ ಮತ್ತು ಹರಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :