ಬೆಂಗಳೂರು: ಕೊನೆಗೂ ಚಿತ್ರರಂಗದ ಬೇಡಿಕೆಗೆ ಒಪ್ಪಿಕೊಂಡ ಸರ್ಕಾರ ಥಿಯೇಟರ್ ಗಳಲ್ಲಿ ಶೇ.100 ಆಸನ ಭರ್ತಿಗೆ ನಾಳೆಯಿಂದಲೇ ಗ್ರೀನ್ ಸಿಗ್ನಲ್ ನೀಡಿದೆ.ಇದುವರೆಗೆ ಕೊರೋನಾ ನಿರ್ಬಂಧಗಳಿಂದಾಗಿ ಥಿಯೇಟರ್ ನಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ ಇತ್ತು. ಇದರಿಂದಾಗಿ ಹಲವು ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಪೋಸ್ಟ್ ಪೋನ್ ಮಾಡಿಕೊಂಡಿದ್ದವು.ಆರೋಗ್ಯ ಸಚಿವ ಡಾ. ಸುಧಾಕರ್ ರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿ ನಿಯೋಗ ಇಂದು ಶೇ.100 ಆಸನಕ್ಕೆ ಅವಕಾಶ ಕೊಡುವಂತೆ ಮನವಿ ಸಲ್ಲಿಸಿದ್ದರು.