ಬೆಂಗಳೂರು : ಟಾಲಿವುಡ್ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಡಿಮ್ಯಾಂಡ್ ಹೆಚ್ಚಾಗಿದೆ. ಆದಕಾರಣ ಇದೀಗ ನಟಿ ತಮ್ಮ ಸಂಭಾವನೆ ಕೂಡ ಹೆಚ್ಚು ಮಾಡಿದ್ದಾರಂತೆ. ಟಾಲಿವುಡ್ ಗೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಮೊದಲಿಗೆ ನಟಿಸಿದ ಚಲೊ ಚಿತ್ರ ಸೂಪರ್ ಹಿಟ್ ಆಗಿತ್ತು. ಆ ಮೂಲಕ ಅವರು ತೆಲುಗು ಇಂಡಸ್ಟ್ರಿಯ ಟಾಪ್ ನಟಿ ಎನಿಸಿಕೊಂಡಿದ್ದಾರೆ. ಸಾಕಷ್ಟು ಚಿತ್ರಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಮೊನ್ನೆಯಷ್ಟೆ ಬಿಡುಗಡೆಯಾಗಿರುವ ಗೀತಗೋವಿಂದಂ