'ನಾನು ಆರೋಗ್ಯವಾಗಿದ್ದೇನೆ, ಅಭಿಮಾನ ಆವೇಶವಾಗುವುದು ಬೇಡ’: ಹಂಸಲೇಖ

ಬೆಂಗಳೂರು| Ramya kosira| Last Modified ಬುಧವಾರ, 24 ನವೆಂಬರ್ 2021 (09:34 IST)
ಬೆಂಗಳೂರು : ಮಠದ ಹಿರಿಯ ಯತಿಗಳು ದಲಿತರ ಮನೆಗೆ ಹೋಗುತ್ತಿದ್ದ ವಿಚಾರದ ಬಗ್ಗೆ ಮೈಸೂರಿನಲ್ಲಿ ಸಮಾರಂಭವೊಂದರಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿದ್ದು ತೀವ್ರ ವಿವಾದ ಮತ್ತು ಚರ್ಚೆಗೆ ಎಡೆಮಾಡಿಕೊಟ್ಟಿತ್ತು.
ಹಂಸಲೇಖ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಹಂಸಲೇಖ ಅವರು ಮಠಕ್ಕೆ ಹೋಗಿ ಕ್ಷಮೆ ಕೇಳಬೇಕೆಂದು ಸಹ ಸಮಾಜದ ಹಲವು ವರ್ಗದ ಜನರು ಒತ್ತಾಯಿಸಿದ್ದರು. ಹೇಳಿಕೆ ವಿವಾದದ ರೂಪ ಪಡೆಯುತ್ತಿದ್ದಂತೆ ಸಂಗೀತ ನಿರ್ದೇಶಕ ಹಂಸಲೇಖ ಸೋಷಿಯಲ್ ಮೀಡಿಯಾ ಮೂಲಕ ಕ್ಷಮೆ ಕೇಳಿದ್ದರು. ನಂತರ ಸಾರ್ವಜನಿಕವಾಗಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಮಧ್ಯೆ ಅವರ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿದವು.
ಇದಕ್ಕೆ ಸ್ವತಃ ಹಂಸಲೇಖ ಅವರೇ ಹೇಳಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :