ಬೆಂಗಳೂರು: ಚಿತ್ರರಂಗದಲ್ಲಿ ಚಾಮಯ್ಯ ಮೇಸ್ಟ್ರು ಎಂದೇ ಗುರುತಿಸಿಕೊಂಡಿದ್ದ ಹಿರಿಯ ನಟ ಅಶ್ವತ್ಥ್ ಪುತ್ರ ಶಂಕರ್ ಅಶ್ವತ್ಥ್ ಜೀವನ ನಿರ್ವಹಣೆಗಾಗಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಸುದ್ದಿ ತಿಳಿದ ಜಗ್ಗೇಶ್ ಖೇದ ವ್ಯಕ್ತಪಡಿಸಿದ್ದಾರೆ. ಹಿಂದೆಲ್ಲಾ ವರ್ಷಕ್ಕೆ 6 ಸಿನಿಮಾ ಮಾಡುತ್ತಿದ್ದೆ. ಆಗ ಅಶಕ್ತ ಕಲಾವಿದರಿಗೆ ಅವಕಾಶ ಕೊಟ್ಟು ನನ್ನ ಕೈಲಾದ ಸಹಾಯ ಮಾಡುತ್ತಿದ್ದೆ. ಈಗ ವರ್ಷಕ್ಕೆ ಒಂದೇ ಸಿನಿಮಾ ಮಾಡುತ್ತಿದ್ದೇನೆ. ಹೆಚ್ಚು ಚಿತ್ರ ಮಾಡುತ್ತಿರುವವರು ಇಂತಹವರಿಗೆ ಸಹಾಯ ಮಾಡುವ