ಬೆಂಗಳೂರು: ಕನ್ನಡ ಶಾಲೆಯೊಂದರ ಕಾರ್ಯಕ್ರಮಕ್ಕೆ ಮಲಯಾಳಿ ಮೂಲದ ನಟಿ, ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ಅವರನ್ನು ಕರೆಸಿದ್ದಕ್ಕೆ ನಟ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಜಗ್ಗೇಶ್ ಕೂಡಾ ಭಾಗವಹಿಸಿದ್ದರು. ಆದರೆ ಕಾರ್ಯಕ್ರಮದ ಬಳಿಕ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾ ವಾರಿಯರ್ ರನ್ನು ಆಹ್ವಾನಿಸಿದ ನಿರ್ಮಾಪಕ ಕೆ ಮಂಜು ವಿರುದ್ಧ ಜಗ್ಗೇಶ್ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.ಪ್ರಿಯಾ ವಾರಿಯರ್ ಕೆ ಮಂಜು ನಿರ್ಮಾಣದ ಸಿನಿಮಾವೊಂದರ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ.