ಬೆಂಗಳೂರು: ನವರಸನಾಯಕ ಜಗ್ಗೇಶ್ ಕೊರೋನಾ ಹೆಸರಿನಲ್ಲಿ ಸುಲಿಗೆ ಮಾಡುತ್ತಿರುವವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್, ಟಿವಿ ವಾಹಿನಿಯಲ್ಲಿ ಹೆಣ ಸಾಗಿಸಲು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಕೊವಿಡ್ ಸಂತ್ರಸ್ತರು ಟಿವಿಲಿ ಮಾತನಾಡಿದ್ದು ನೋಡಿ ಸಂಕಟವಾಯ್ತು. ಆಸ್ಪತ್ರೆ, ಆಂಬ್ಯುಲೆನ್ಸ್, ಸ್ಮಶಾನ ಸಿಬ್ಬಂದಿ ಹಣಕ್ಕಾಗಿ ಸಾಯಬೇಡಿ. ಮುಂದೊಂದು ದಿನ ಅನ್ನ ಸಿಗದೇ ಸಾಯ್ತೀರಿ. ನೊಂದವರಿಗೆ ಭುಜ ಕೊಟ್ಟು ಸಹಾಯ