ಚೆನ್ನೈ : ತಮಿಳುನಾಡಿನ ದಿವಂಗತ ಮುಖ್ಯ ಮಂತ್ರಿ ಜಯಲಲಿತಾ ಅವರ ಜೀವನಚರಿತ್ರೆ ಆಧಾರಿತ ‘ಥಲೈವಿ’ ಚಿತ್ರದ ಬಿಡುಗಡೆಯ ದಿನಾಂಕವನ್ನು ನಿರ್ಮಾಪಕರು ಘೋಷಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಜಯಲಲಿತಾ ಪಾತ್ರವನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತೆ ಬಾಲಿವುಡ್ ನಟಿ ಕಂಗನಾ ರನೌತ್ ಮಾಡುತ್ತಿದ್ದಾರೆ. ಈ ಚಿತ್ರವನ್ನು ಏಪ್ರಿಲ್ 23 2021ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಈ ವಿಚಾರವನ್ನು ಅವರು ಮೋಷನ್ ಪೋಸ್ಟರ್ ನೊಂದಿಗೆ ಘೋಷಿಸಿದ್ದಾರೆ. ಈ ಚಿತ್ರ ತಮಿಳುನಾಡಿನ ರಾಜಕೀಯ