ನಟಿ ಜಯಂತಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸಂತಾಪ

ಬೆಂಗಳೂರು| Krishnaveni K| Last Modified ಸೋಮವಾರ, 26 ಜುಲೈ 2021 (10:06 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
 > ಪ್ರಖ್ಯಾತ ಕಲಾವಿದೆ, ಅಭಿನಯ ಶಾರದೆ ಜಯಂತಿ ನಿಧನದ ಸುದ್ದಿ ಅತೀವ ದುಃಖ ತಂದಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಸಿಎಂ ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.>   ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಇಷ್ಟದ ನಟಿ ಜಯಂತಿ ನಿಧನದಿಂದ ಅತೀವ ದುಃಖವಾಗಿದೆ. ಅವರ ಚಿತ್ರಗಳ ಮೂಲಕ ನಮ್ಮ ಮನದಲ್ಲಿ ಎಂದಿಗೂ ಅಜರಾಮರಾಗಿರುತ್ತಾರೆ ಎಂದಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :