ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಗೆ ಕೊರೋನಾ ದೃಢಪಟ್ಟಿದ್ದು, ಅನಾರೋಗ್ಯದಿಂದಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇತ್ತೀಚೆಗೆ ಕಮಲ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಅಮೆರಿಕಾಗೆ ತೆರಳಿದ್ದರು. ಅಲ್ಲಿಂದ ಮರಳಿದ ಕೆಲವೇ ದಿನಗಳಲ್ಲಿ ಕೊರೋನಾ ಸೋಂಕು ತಗುಲಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಕಮಲ್, ವಿದೇಶದಿಂದ ಮರಳಿದ ಬಳಿಕ ಕೆಮ್ಮು ಕಂಡುಬಂದಿದೆ. ಇದೀಗ ಚೆನ್ನೈನ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.