ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲರಾಗಿರುವ ನಟಿ, ಮಾಜಿ ಸಂಸದೆ ರಮ್ಯಾ ಆಗಾಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಟೀಕಾಸ್ತ್ರ ಪ್ರಯೋಗಿಸುತ್ತಾ ಅದಕ್ಕೆ ಪ್ರತಿಯಾಗಿ ಟೀಕೆಗಳನ್ನ ಎದುರಿಸಿದ್ದಿದೆ. ಈ ಬಾರಿಯೂ ಮೋದಿಯನ್ನ ಟೀಕಿಸುವ ಭರದಲ್ಲಿ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಅಸ್ಸಾಂ, ಗುಜರಾತ್ ಅಥವಾ ಬಿಹಾರ ನೆರೆ ಸಂತ್ರಸ್ತ ಜೊತೆ ಪ್ರಧಾನಮಂತ್ರಿ ನರೇಂದ್ರಮೋದಿ ಇರುವ ಫೋಟೋ ತೋರಿಸಿದರೆ 25000 ರೂ. ಬಹುಮಾನ ನೀಡುತ್ತೇನೆ. ಪೋಟೋಸಾಫ್ ಫೋಟೋ ಬಿಟ್ಟು