ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆಯಾ? ಹೀಗೊಂದು ಆರೋಪ ಕೇಳಿಬಂದಿದೆ.ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡಕ್ಕಿಂತ ಬೇರೆ ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಸಲಾರ್ ಕನ್ನಡ ಆವೃತ್ತಿಗೆ ಕೇವಲ 10 ಶೋ ನೀಡಲಾಗಿದೆ.