ಅಗ್ರಜ ಚಿತ್ರದ ನಂತರ ಹೆಚ್.ಎಂ.ಶ್ರೀನಂದನ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಎರಡನೇ ಚಿತ್ರ ಲೀ. ಹಿರಿಯ ನಿರ್ಮಾಪಕ ಶೈಲೇಂದ್ರ ಬಾಬು ಅವರ ಪುತ್ರ ಸುಮತ್ ಶೈಲೇಂದ್ರ ಹಾಗೂ ವಜ್ರಕಾಯ ಖ್ಯಾತಿಯ ನಭಾ ನಟೇಶ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ ಸರ್ ಪುಟ್ಟಣ್ಣಶಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ವರ್ಣರಂಜಿತ ಸಮಾರಂಭದೊಂದಿಗೆ ನೆರವೇರಿತು. ಚಲನಚಿತ್ರ ವಾಣಿಜ್ಯಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ, ಹಾಗೂ ಛೇಂಬರ್