ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಾಂತಾರ 2 ಯಾವಾಗ ಶುರು ಎಂಬುದಕ್ಕೆ ಉತ್ತರ ಸಿಕ್ಕಿದೆ.ಕಾಂತಾರ 1 ಅನಿರೀಕ್ಷಿತವಾಗಿ ಭಾರೀ ಸಕ್ಸಸ್ ಆದ ಮೇಲೆ ರಿಷಬ್ ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ಸಿಕ್ಕಿತು. ಹೀಗಾಗಿ ರಿಷಬ್ ಮತ್ತು ತಂಡ ಕಾಂತಾರ 2 ಗಾಗಿ ಸಾಕಷ್ಟು ತಯಾರಿ ನಡೆಸಿದೆ.ಕಳೆದ ಒಂದು ವರ್ಷದಿಂದ ಹೊಂಬಾಳೆ ಫಿಲಂಸ್ ಮತ್ತು ರಿಷಬ್ ಶೆಟ್ಟಿ ಕಾಂತಾರ 2 ಚಿತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸಿದೆ.