2016 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಪ್ರಥಮ ಅತ್ಯುತ್ತಮ ಚಿತ್ರಕ್ಕೆ ಅಮರಾವತಿ ಆಯ್ಕೆಯಾಗಿದ್ದು, ಎರಡನೇ ಅತ್ಯುತ್ತಮ ಪ್ರಶಸ್ತಿಯನ್ನು ರೈಲ್ವೆ ಚಿಲ್ಡ್ರನ್ ಬಾಚಿಕೊಂಡಿದೆ. ಮೂರನೇ ಅತ್ಯುತ್ತಮ ಚಿತ್ರವಾಗಿ ಅಂತರ್ಜಲ ಹೊರಹೊಮ್ಮಿದೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಚಿತ್ರನಿರ್ದೇಶಕಿ ಕವಿತಾ ಲಂಕೇಶ್ ನೇತೃತ್ವದಲ್ಲಿ ಚಲನಚಿತ್ರ ಪ್ರಶಸ್ತಿ ಆಯ್ಕೆ ಮಾಡಲು ಎಂಟು ಮಂದಿ ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು ಎಂದು ಹೇಳಿದ್ದಾರೆ. ವರನಟ,ನಟ ಸಾರ್ವಭೌಮ ಡಾ.ರಾಜ್ಕುಮಾರ್