ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಅವರ ಗುಡ್ ಲಕ್ ಸಿನಿಮಾ ಟೀಸರ್ ಸ್ವಾತಂತ್ರ್ಯ ದಿನಾಚರಣೆಯಂದು ರಿಲೀಸ್ ಆಗಿದೆ. ಸ್ಟಾರ್ ನಟರು ಈ ಸಿನಿಮಾದ ಟೀಸರ್ ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಳ್ಳಿ ಹುಡುಗಿ ವೇಷದಲ್ಲಿ ನಟಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಮೂರು ಭಾಷೆಯಲ್ಲಿ ರಿಲೀಸ್ ಆಗಲಿದೆ. ಹಾಗಾಗಿ ಈ ಮೂರು ಭಾಷೆಯಲ್ಲಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ.