ನಾಳೆ ಕೆಜಿಎಫ್ 2 ರಿಲೀಸ್ ಡೇಟ್ ಘೋಷಣೆ

ಬೆಂಗಳೂರು| Krishnaveni K| Last Modified ಗುರುವಾರ, 15 ಜುಲೈ 2021 (12:57 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಎಲ್ಲವೂ ರಿಲೀಸ್ ಡೇಟ್ ಯಾವಾಗ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗುವ ನಿರೀಕ್ಷೆಯಿದೆ.  
> ಸಿನಿಮಾ ಬಿಡುಗಡೆ ಬಗ್ಗೆ ಅನೇಕ ಸುದ್ದಿಗಳು ಓಡಾಡುತ್ತಲೇ ಇವೆ. ನಾಳೆ ಚಿತ್ರತಂಡ ಪಕ್ಕಾ ಡೇಟ್ ಅನೌನ್ಸ್ ಮಾಡುವ ಮೂಲಕ ಇದಕ್ಕೆ ಅಂತ್ಯ ಹಾಡುವ ನಿರೀಕ್ಷೆಯಿದೆ.>   ನಾಳೆ ಚಿತ್ರತಂಡ ರಿಲೀಸ್ ಡೇಟ್ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಈಗಲೇ ಕಾತುರದಿಂದ ಕಾಯುತ್ತಿದ್ದಾರೆ. ಲಾಕ್ ಡೌನ್ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿತ್ತು. ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆಯಿದೆ.ಇದರಲ್ಲಿ ಇನ್ನಷ್ಟು ಓದಿ :