ಹಲವಾರು ಏರಿಳಿತಗಳ ನಡುವೆಯೂ ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 2022 ಏಪ್ರಿಲ್ 14ರಂದು ಬಿಡುಗಡೆ ಆಗಿದೆ. ನಟ ಯಶ್ ಟ್ವಿಟರ್ ನಲ್ಲಿ ಕೆಜಿಎಫ್-2 ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೆಜಿಎಫ್ ಮೊದಲ ಚಿತ್ರ ಗಡಿ ದಾಟಿ ದಾಖಲೆ ಬರೆದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡನೇ ಭಾಗದ ಚಿತ್ರಕ್ಕೆ ಭಾರೀ ಬೇಡಿಕೆ ಉಂಟಾಗಿದ್ದು, ಭಾರೀ ನಿರೀಕ್ಷೆ ಮೂಡಿಸಿತ್ತು.