ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರದ ಟೀಸರ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದ ಟೀಸರ್ ಜನವರಿ 8 ರಂದು ಹೊರಬರುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ರಾಕಿಂಗ್ ಸ್ಟಾರ್ ಯಶ್ ಜನ್ಮದಿನಕ್ಕೆ ಟೀಸರ್ ಹೊರಬೀಳಲಿದೆ. ಅಂದು ಬೆಳಿಗ್ಗೆ 10.18 ಕ್ಕೆ ಟೀಸರ್ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು, ರಾಕಿಂಗ್ ಅಭಿಮಾನಿಗಳು ಈಗಾಗಲೇ ತಮ್ಮ ಬಾಸ್ ಸಿನಿಮಾ ಟೀಸರ್ ಹಿಟ್ ಮಾಡಲು ಎಲ್ಲಾ ಸಿದ್ಧತೆ ನಡೆಸಿದ್ದಾರೆ. ಕೆಜಿಎಫ್ ಟೈಮ್ಸ್ ಎಂದು