ಬೆಂಗಳೂರು: ಕನ್ನಡ ಚಿತ್ರರಂಗವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಕೆಜಿಎಫ್ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಇಂದಿಗೆ ಮೂರು ವರ್ಷವಾಗಿದೆ.ಈ ದಿನವನ್ನು ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಪಾಲಿಗೆ ಹಲವು ದಾಖಲೆ ಮಾಡಿದ್ದ ಈ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಯಶ್ ನ್ಯಾಷನಲ್ ಸ್ಟಾರ್ ಆದರು.ಇದೀಗ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಮುಂದಿನ ವರ್ಷ ಏಪ್ರಿಲ್ 14 ರಂದು ಚಿತ್ರ ತೆರೆಗೆ ಬರಲಿದೆ.