ಬೆಂಗಳೂರು: ಕೆಜಿಎಫ್ ಚಾಪ್ಟರ್ 1 ರ ಯಶಸ್ಸಿನ ನಂತರ ಕೆಜಿಎಫ್ ಚಾಪ್ಟರ್ 2 ಯಾವಾಗ ಎಂಬ ಪ್ರಶ್ನೆಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ.ಬೆಂಗಳೂರಿನ ಕೋದಂಡರಾಮ ದೇವಾಲಯದಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಇದರೊಂದಿಗೆ ಚಿತ್ರತಂಡ ಹೇಳಿದಂತೆಯೇ ಇದೀಗ ಚಿತ್ರೀಕರಣಕ್ಕೆ ಚಾಲನೆ ನೀಡಿದೆ.ಮುಹೂರ್ತ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಪ್ರಶಾಂತ್, ನಿರ್ಮಾಪಕ ವಿಜಯ್ ಕಿರಗಂದೂರು, ಭುವನ್ ಗೌಡ, ನಾಯಕಿ ಶ್ರೀನಿಧಿ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು. ಕೆಜಿಎಫ್ ಚಾಪ್ಟರ್