ಬೆಂಗಳೂರು: ಕೆಜಿಎಫ್ ಸಿನಿಮಾ ಅಬ್ಬರ ನೋಡಿದಾಗಲೇ ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆಯುವುದು ಖಾತ್ರಿ ಮಾಡಿತ್ತು. ಅದೀತ ನಿಜವಾಗಿದೆ.ಕೆಜಿಎಫ್ ಸಿನಿಮಾ ವಿಶ್ವದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಈಗ ಯಶಸ್ವೀ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, 200 ಕೋಟಿ ಗಳಿಕೆ ಮಾಡಿದೆ. ಈ ಮೂಲಕ 200 ಕೋಟಿ ಗಳಿಕೆ ಮಾಡಿದ ಮೊದಲ ಕನ್ನಡ ಸಿನಿಮಾ ಎಂಬ ದಾಖಲೆಗೆ ಪಾತ್ರವಾಗಿದೆ.ಕನ್ನಡ ಮಾತ್ರವಲ್ಲ, ಬೇರೆ ಭಾಷೆಗಳಲ್ಲೂ ಸಿನಿಮಾ ಸೂಪರ್ ಹಿಟ್ ಆಗಿದೆ.