ಬೆಂಗಳೂರು : ಖ್ಯಾತ ಸಿನಿಮಾ ಡೇಟಾಬೇಸ್ ವೆಬ್ಸೈಟ್ ಇಂಟರ್ ನೆಟ್ ಮೂವಿ ಡೇಟಾ ಬೇಸ್(ಐಎಂಡಿಬಿ) ಪಟ್ಟಿಯಲ್ಲಿ ಕೆಜಿಎಫ್ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಪಟ್ಟಿಯಲ್ಲಿ ರಜಿನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ಮೊದಲ ಸ್ಥಾನದಲ್ಲಿದ್ದರೆ, ಯಶ್ ಅಭಿನಯದ ಕೆಜಿಎಫ್ ಎರಡನೇ ಸ್ಥಾನ ಪಡೆದುಕೊಂಡಿದೆ. ತೆಲುಗಿನ ವಿಜಯ್ ದೇವರಕೊಂಡ ಅಭಿನಯದ ಟ್ಯಾಕ್ಸಿವಾಲಾ ಮೂರನೇ ಸ್ಥಾನದಲ್ಲಿದೆ. ಶಾರುಖ್ ಖಾನ್ ಝೀರೋ ಚಿತ್ರ