ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಎರಡನೇ ವಾರವೂ ಎಲ್ಲಾ ಭಾಷೆಯಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಇದೀಗ 150 ಕೋಟಿ ಗಳಿಕೆ ಮಾಡಿದ ಸಿನಿಮಾಗಳ ಪಟ್ಟಿ ಸೇರಿದೆ.70 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕನ್ನಡ ಸಿನಿಮಾ ಈಗ ಹಿಂದಿ, ತಮಿಳು, ತೆಲುಗು ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ಒಟ್ಟಾಗಿ 150 ಕೋಟಿ ರೂ. ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಮೂಲಕ ಬಾಹುಬಲಿ, ರೋಬೋಟ್ ಬಳಿಕ ಪ್ರಾದೇಶಿಕ ಭಾಷೆಯ ಸಿನಿಮಾವೊಂದು ಹಿಂದಿ ಸೇರಿದಂತೆ ಎಲ್ಲಾ