ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಜೈ ಎಂದಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದೇಶದ 128 ಕೋಟಿ ಜನರು ಒಬ್ಬ ವ್ಯಕ್ತಿಯನ್ನು ನಂಬಿದ್ದಾರೆ. ಅವರ ಮೇಲೆ ಅಪಾರ ನಂಬಿಕೆಯನ್ನು ಇಟ್ಟಿದ್ದಾರೆ. ಅವರು ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದು ನಟಿ ಹೇಳಿದ್ದಾರೆ. ತಮಗೆ ಬಿಜೆಪಿ ಏನು ಕೊಡುತ್ತದೆ? ಏನು ಮಾಡಲಿದೆ ಎನ್ನುವುದು ಮುಖ್ಯವಲ್ಲ.