ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕುರಿತಂತೆ ಇಂದ್ರಜಿತ್ ಲಂಕೇಶ್ ಹೇಳಿಕೆಗೆ ಹಲವರು ಪರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಇಂದ್ರಜಿತ್ ಜತೆ ಕಿಚ್ಚ ಸುದೀಪ್ ಕಾಣಿಸಿಕೊಂಡಿರುವುದು ಕುತೂಹಲ ಕೆರಳಿಸಿದೆ. ಇಂದ್ರಜಿತ್ ಜತೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ಈ ಮೂಲಕ ಡ್ರಗ್ ಮಾಫಿಯಾ ಬಗ್ಗೆ ಆರೋಪ ಮಾಡಿದ್ದ ಇಂದ್ರಜಿತ್ ಗೆ ಬೆಂಬಲ ನೀಡಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಜತೆಗೆ ಇಂದ್ರಜಿತ್ ಅವರನ್ನು ಹಲವು ವರ್ಷಗಳಿಂದ ಬಲ್ಲೆ.