ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾ ಪ್ಯಾನ್ ಇಂಡಿಯಾ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ. ಫ್ಯಾಂಟಮ್ ಎರಡು ಹಂತದ ಚಿತ್ರೀಕರಣ ಮುಗಿಸಿ ಮೂರನೇ ಹಂತಕ್ಕೆ ಸಿದ್ಧವಾಗಿದೆ. ಈ ನಡುವೆ ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕಲು ಬಾಲಿವುಡ್ ನ ಸ್ಟಾರ್ ನಟಿ ಕತ್ರಿನಾ ಕೈಫ್ ರನ್ನು ಕರೆತರುವ ಬಗ್ಗೆ ಸುದ್ದಿ ಬಂದಿತ್ತು. ಇದೀಗ ಫ್ಯಾಂಟಮ್ ಬಹುಭಾಷೆಗಳಲ್ಲಿ ರಿಲೀಸ್ ಆಗಲಿರುವ ಸುದ್ದಿ ಕೇಳಿಬರುತ್ತಿದೆ.